ನಾಳೆ ಜೆಸ್ಕಾಂ ಉಪವಿಭಾಗ-1ರಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ, 05 ಜುಲೈ (ಹಿ.ಸ.) ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆ.ವಿ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಿ0ದ ವಿದ್ಯುತ್ ಸರಬರಾಜಾಗುವ ಎಫ್-63 ನಲ್ಲಿ ಲಿಂಕ್-ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜುಲೈ 06 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ
ನಾಳೆ ಜೆಸ್ಕಾಂ ಉಪವಿಭಾಗ-1ರಲ್ಲಿ ವಿದ್ಯುತ್ ವ್ಯತ್ಯಯ


ಬಳ್ಳಾರಿ, 05 ಜುಲೈ (ಹಿ.ಸ.)

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆ.ವಿ ಬಿಸಿಲಹಳ್ಳಿ ವಿದ್ಯುತ್ ಉಪ-ಕೇಂದ್ರದಿ0ದ ವಿದ್ಯುತ್ ಸರಬರಾಜಾಗುವ ಎಫ್-63 ನಲ್ಲಿ ಲಿಂಕ್-ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜುಲೈ 06 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*

ಎಫ್-63 ವ್ಯಾಪ್ತಿಯ ರೂಪನಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಹಾಗೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande