
ಬೀದರ್, 05 ಜುಲೈ (ಹಿ.ಸ.):
ಆ್ಯಂಕರ್:
ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಬೀದರ ನಗರದ ಶ್ರೀ ಗಣೇಶ್ ಮೈದಾನಕ್ಕೆ ಭೇಟಿ ನೀಡಿ, ನಾಳೆ ನಡೆಯಲಿರುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಬೀದರ ಜಿಲ್ಲಾ ಪ್ರವಾಸದ ಅಂಗವಾಗಿ ಆಯೋಜಿಸಿರುವ ಸಮಾವೇಶದ ಸಿದ್ಧತೆಗಳ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಭಾ ವೇದಿಕೆ, ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯಗಳು, ವಾಹನ ನಿಲುಗಡೆ ವ್ಯವಸ್ಥೆ, ಭದ್ರತಾ ಕ್ರಮಗಳು ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು, ಕಾರ್ಯಕ್ರಮವು ಸುಸೂತ್ರವಾಗಿ ನಡೆಯುವಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ನಾಳೆ ನಡೆಯಲಿರುವ ಈ ಮಹತ್ವದ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.