
ಬೆಂಗಳೂರು, 05 ಜುಲೈ (ಹಿ.ಸ.):
ಆ್ಯಂಕರ್:
ಪ್ರತಿ ಪಕ್ಷದವರಿಗೆ ಅರೋಪ ಮಾಡುವುದೇ ಕೆಲಸ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ರಾಜ್ಯಸಭೆ ಪ್ರತಿ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.
ಎಸ್ಐಆರ್ ಪ್ರಕ್ರಿಯೆಯನ್ನು ಮನೆ ಮನೆಗೆ ಹೋಗಿ ಮಾಡದೇ ಒಂದೇ ಕಡೆ ಮಾಡಲಾಗುತ್ತಿದೆ ಎಂಬ ಪ್ರತಿ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, ಸರ್ಕಾರದ ವತಿಯಿಂದ ನಾವು ಎಲ್ಲರಿಗೂ ನ್ಯಾಯ ಒದಗಿಸಿಕೊಡಬೇಕು ಹಾಗೂ ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು ಮನವಿ ಮಾಡಿದ್ದೇವೆ. ನಮ್ಮದೂ ಪ್ರತಿಭಟನೆ ಇದೆ. ಅದನ್ನು ನ್ಯಾಯಬದ್ಧವಾಗಿ ಎಲ್ಲಿ ಪ್ರತಿಭಟಿಸಬೇಕೋ ಅಲ್ಲಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.