ಕೊಪ್ಪಳ : ಹಿಂದುಳಿದ ವರ್ಗದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ
ಕೊಪ್ಪಳ, 05 ಜುಲೈ (ಹಿ.ಸ.) ಆ್ಯಂಕರ್ :ಕೊಪ್ಪಳ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಮಾಧ್ಯಮ ಮಾನ್ಯತೆ ಹೊಂದಿರುವ ಹಿಂದುಳಿದ ವರ್ಗದ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಲ್ಯಾಪಟಾಪ್ ಹಾಗೂ ಕ್ಯಾಮರಾ ಉಪಕರಣಗಳ ಒಳಗೊಂಡ ಮೀಡಿಯಾ ಕಿಟ್ ಅನ್ನು ವಸತಿ ಹಾಗೂ ಸಮಾಜ ಕಲ್ಯಾ
Media kits distributed to journalists from backward classes


ಕೊಪ್ಪಳ, 05 ಜುಲೈ (ಹಿ.ಸ.)

ಆ್ಯಂಕರ್ :ಕೊಪ್ಪಳ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಮಾಧ್ಯಮ ಮಾನ್ಯತೆ ಹೊಂದಿರುವ ಹಿಂದುಳಿದ ವರ್ಗದ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಲ್ಯಾಪಟಾಪ್ ಹಾಗೂ ಕ್ಯಾಮರಾ ಉಪಕರಣಗಳ ಒಳಗೊಂಡ ಮೀಡಿಯಾ ಕಿಟ್ ಅನ್ನು ವಸತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ವಿತರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ಪರಿಸ್ಥಿತಿಯ ಅವಲೋಕನ ಸಭೆಯ ಬಳಿಕ ಕಾರ್ಯದರ್ಶಿಗಳು, ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗದ ಪತ್ರಕರ್ತರಾದ ಪ್ರಕಾಶ ಕಂದಕೂರ ಅವರಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ್ ಬಿ.ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande