ಕೃಷಿ ಪಂಡಿತ ಪ್ರಶಸ್ತಿಗೆ ಆನ್ಲೈನ್ ಅರ್ಜಿ ಆಹ್ವಾನ
ಗದಗ, 05 ಜುಲೈ (ಹಿ.ಸ.) ಆ್ಯಂಕರ್:- 2026-27ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಗದಗ ತಾಲೂಕಿನ ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ತ
ಫೋಟೋ


ಗದಗ, 05 ಜುಲೈ (ಹಿ.ಸ.)

ಆ್ಯಂಕರ್:- 2026-27ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಗದಗ ತಾಲೂಕಿನ ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರೈತರು ಕೆ-ಕಿಸಾನ್ ಪೋರ್ಟಲ್ನ ಆರ್ಎಸ್ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ರೈತರು ತಮ್ಮ ಫ್ರೂಟ್ ಐಡಿ ಸಂಖ್ಯೆಯನ್ನು ಬಳಸಿ ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ರೈತರು ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಪ್ರಶಸ್ತಿಗೆ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳನ್ನು ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪರಿಶೀಲನಾ ತಂಡವು ಪರಿಶೀಲಿಸಲಿದೆ. ಅರ್ಜಿ ಸಲ್ಲಿಸಿದ ರೈತರ ಜಮೀನುಗಳಿಗೆ ಕ್ಷೇತ್ರ ಭೇಟಿ ನೀಡಿ, ಸರ್ಕಾರದ ಮಾರ್ಗಸೂಚಿಗಳಂತೆ ಮೌಲ್ಯಮಾಪನ ನಡೆಸಲಾಗುವುದು. ಬಳಿಕ ಪುರುಷರ ವಿಭಾಗದಲ್ಲಿ ಮೂರು ಹಾಗೂ ಮಹಿಳೆಯರ ವಿಭಾಗದಲ್ಲಿ ಮೂರು ಅತ್ಯುತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟದ ಕೇಂದ್ರ ಕಚೇರಿಗೆ ಶಿಫಾರಸು ಮಾಡಲಾಗುವುದು.

ರೈತ ಸಂಪರ್ಕ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ರೈತರಿಂದ ಅಗತ್ಯ ದಾಖಲೆಗಳ ಭೌತಿಕ ಪ್ರತಿಗಳನ್ನೂ ಸ್ವೀಕರಿಸಲಾಗುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಲ್ಲಾ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಕೃಷಿ ಇಲಾಖೆ ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಕೃಷಿ ಕ್ಷೇತ್ರದಲ್ಲಿ ವಿನೂತನ ಸಾಧನೆ ಮಾಡಿರುವ ರೈತರು ಹಾಗೂ ರೈತ ಮಹಿಳೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande