ಎಸ್ಐಆರ್ ಸಮೀಕ್ಷೆ ಪರಿಶೀಲಿಸಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್
ಬೆಂಗಳೂರು, 05 ಜುಲೈ (ಹಿ.ಸ.): ಆ್ಯಂಕರ್: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್–2026) ಅಂಗವಾಗಿ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆ ಮತ್ತು ಪರಿಶೀಲನಾ ಕಾರ್ಯವನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಜಂಟಿ ಆಯುಕ್ತೆ ಮಧು ಅವರೊಂದಿಗೆ ಸ್ಥಳಕ್ಕೆ ಭೇಟಿ ನೀ
SIR review


ಬೆಂಗಳೂರು, 05 ಜುಲೈ (ಹಿ.ಸ.):

ಆ್ಯಂಕರ್:

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್–2026) ಅಂಗವಾಗಿ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆ ಮತ್ತು ಪರಿಶೀಲನಾ ಕಾರ್ಯವನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಜಂಟಿ ಆಯುಕ್ತೆ ಮಧು ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪರಿಶೀಲನೆ ವೇಳೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವುದು ಹಾಗೂ ಪರಿಶೀಲಿಸುವ ಕಾರ್ಯವನ್ನು ಆಯುಕ್ತರು ಅವಲೋಕಿಸಿದರು. ಇದೇ ವೇಳೆ ಬಿಎಲ್‌ಒಗಳೊಂದಿಗೆ ಸಂವಾದ ನಡೆಸಿದ ಅವರು, ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯೊಳಗೆ ಸಮರ್ಪಕವಾಗಿ, ನಿಖರವಾಗಿ ಹಾಗೂ ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್‌ಐಆರ್–2026 ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವುದು ಹಾಗೂ ಪ್ರತಿಯೊಬ್ಬ ಅರ್ಹ ಮತದಾರರಿಗೂ ಮನೆ-ಮನೆ ಪರಿಶೀಲನೆ ತಲುಪುವಂತೆ ನೋಡಿಕೊಳ್ಳುವುದು ಈ ಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾರರ ಪಟ್ಟಿಯನ್ನು ಹೆಚ್ಚು ನಿಖರ ಮತ್ತು ಸಮಗ್ರವಾಗಿಸಲು ಎಸ್‌ಐಆರ್–2026 ಅಡಿಯಲ್ಲಿ ರಾಜ್ಯಾದ್ಯಂತ ಮನೆ-ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರ ಮಾಹಿತಿಯನ್ನು ನವೀಕರಿಸುವ ಪ್ರಕ್ರಿಯೆಗೆ ಅಧಿಕಾರಿಗಳು ವಿಶೇಷ ಒತ್ತು ನೀಡುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande