ಅರಳದಿನ್ನಿ ಗ್ರಾಮದಲ್ಲಿ ಎಸ್ಐಆರ್ ಜಾಗೃತಿ ಜಾಥಾ
ವಿಜಯಪುರ, 05 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ಆಲಮಟ್ಟಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ
ಜಾಥಾ


ವಿಜಯಪುರ, 05 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ಆಲಮಟ್ಟಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾನುವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ನಿಡಗುಂದಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ ಹಾಗೂ ತಹಶೀಲ್ದಾರರಾದ ಎ.ಡಿ. ಅಮರವಾಡಗಿ ಅವರು ಜಂಟಿಯಾಗಿ ಚಾಲನೆ ನೀಡಿದರು. ಬಳಿಕ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಿ, ಮತದಾರರ ನೋಂದಣಿ, ವಿವರಗಳ ಪರಿಷ್ಕರಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆಯ ಮಹತ್ವವನ್ನು ಸಾರುವ ಘೋಷಣೆಗಳನ್ನು ಕೂಗಿ ಗ್ರಾಮಸ್ಥರ ಗಮನ ಸೆಳೆದರು.

ಜಾಥಾದ ವೇಳೆ ಸ್ವೀಪ್ ಸಮಿತಿ ಸದಸ್ಯರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಅಭಿಯಾನದ ಉದ್ದೇಶ, ಅರ್ಹ ಮತದಾರರು ಹೆಸರು ನೋಂದಾಯಿಸಿಕೊಳ್ಳುವ ಅಗತ್ಯ, ತಪ್ಪು ಮಾಹಿತಿಗಳನ್ನು ತಿದ್ದುಪಡಿ ಮಾಡಿಸಿಕೊಳ್ಳುವ ವಿಧಾನ ಹಾಗೂ ಮತದಾರರ ಪಟ್ಟಿಯನ್ನು ನಿಖರವಾಗಿಡುವ ಮಹತ್ವದ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.

ಅಧಿಕಾರಿಗಳು ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನ ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಇಆರ್ಒ ಎಂ.ಬಿ. ನಾಗಠಾಣ, ಪಿಡಿಒ ಜಿ.ಬಿ. ಕಲ್ಯಾಣಿ, ಆಡಳಿತಾಧಿಕಾರಿ ಅಬೂಬಕರ್ ಬಾಗವಾನ, ಕಾರ್ಯದರ್ಶಿ ಅಜೀಜ್ ಬಾರೇ ಇಮಾಮ್, ತಾಲೂಕು ಐಇಸಿ ಸಂಯೋಜಕ ದಸ್ತಗೀರ್ ಗುಡಿಹಾಳ, ಬಿಎಲ್ಒಗಳು, ಆಶಾ ಕಾರ್ಯಕರ್ತೆಯರು, ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಾಗೃತಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ತಾಲೂಕು ಆಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡ ಈ ಜಾಗೃತಿ ಜಾಥಾ ಗ್ರಾಮಸ್ಥರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande