ಸಲೀಂ ಅಹ್ಮದ್ ನಿವಾಸದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನೋಂದಣಿ
ಬೆಂಗಳೂರು, 05 ಜುಲೈ (ಹಿ.ಸ.): ಆ್ಯಂಕರ್: ರಾಜ್ಯಾದ್ಯಂತ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಅಂಗವಾಗಿ ಮನೆ-ಮನೆ ಸಮೀಕ್ಷೆ ಕಾರ್ಯ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಕರ್ನಾಟಕ ವಿಧ
SIR


ಬೆಂಗಳೂರು, 05 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯಾದ್ಯಂತ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಅಂಗವಾಗಿ ಮನೆ-ಮನೆ ಸಮೀಕ್ಷೆ ಕಾರ್ಯ ಚುರುಕುಗೊಂಡಿದೆ.

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರ ನಿವಾಸಕ್ಕೆ ಸಂಬಂಧಿತ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಭೇಟಿ ನೀಡಿ, ಮತದಾರರ ನೋಂದಣಿ ಹಾಗೂ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ನಡೆಸಿದರು.

ಮತದಾರರ ಪಟ್ಟಿಯನ್ನು ಹೆಚ್ಚು ನಿಖರ ಹಾಗೂ ನವೀಕೃತಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಮತದಾರರ ವಿವರಗಳ ಪರಿಶೀಲನೆ, ಅಗತ್ಯ ತಿದ್ದುಪಡಿ ಮತ್ತು ನೋಂದಣಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಜುಲೈ 29ರವರೆಗೆ ನಡೆಯಲಿರುವ ಈ ವಿಶೇಷ ಅಭಿಯಾನದಲ್ಲಿ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಚುನಾವಣಾ ಅಧಿಕಾರಿಗಳು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande