ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವುದು ಅತ್ಯಗತ್ಯ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, 05 ಜುಲೈ (ಹಿ.ಸ.): ಆ್ಯಂಕರ್: ಮತದಾನ ಎಷ್ಟು ಮುಖ್ಯವೋ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಸಿಕೊಳ್ಳುವುದೂ ಅಷ್ಟೇ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್‌) ಪ್ರ
SIR BKH


ಬೆಂಗಳೂರು, 05 ಜುಲೈ (ಹಿ.ಸ.):

ಆ್ಯಂಕರ್:

ಮತದಾನ ಎಷ್ಟು ಮುಖ್ಯವೋ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಸಿಕೊಳ್ಳುವುದೂ ಅಷ್ಟೇ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಂಡಿರುವುದಾಗಿ ತಿಳಿಸಿರುವ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಸಹ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೋಂದಣಿ ಮಾಡುವ ಮೂಲಕ ನಾನು ನನ್ನ ಕರ್ತವ್ಯವನ್ನು ನಿಭಾಯಿಸಿದ್ದೇನೆ. ನಾಡಿನ ಪ್ರತಿಯೊಬ್ಬ ಅರ್ಹ ಮತದಾರರೂ ಬಿಎಲ್‌ಒಗಳಿಗೆ ಅಗತ್ಯ ಸಹಕಾರ ನೀಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಾಗರಿಕರ ಸಕ್ರಿಯ ಸಹಭಾಗಿತ್ವವು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande