ಚಿಕ್ಕಪಡಸಲಗಿ ಕೊಲೆ ಪ್ರಕರಣ: ಮೂವರ ಬಂಧನ – ತನಿಖೆ ಮುಂದುವರಿದಿದೆ ಎಂದ ಎಸ್ಪಿ ಸಿದ್ದಾರ್ಥ್ ಗೋಯಲ್
ಬಾಗಲಕೋಟೆ, 05 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಮಹತ್ವದ ಮಾಹಿತಿ ನೀಡಿದ್ದಾರ
ಕೊಲೆ


ಬಾಗಲಕೋಟೆ, 05 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಮಹತ್ವದ ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಕುರಿತು ಇನ್ನಷ್ಟು ಸಮಗ್ರ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಮಲ್ಲಪ್ಪ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊರೆತ ಸುಳಿವುಗಳು, ಸಾಕ್ಷ್ಯಗಳು ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದ್ದು, ಕೊಲೆಗೆ ನಿಖರ ಕಾರಣವೇನು, ಇದರ ಹಿಂದೆ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ. ಅಗತ್ಯವಿದ್ದಲ್ಲಿ ಮತ್ತಷ್ಟು ಆರೋಪಿಗಳನ್ನೂ ಬಂಧಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬದ್ಧವಾಗಿದ್ದು, ಯಾವುದೇ ಅಪರಾಧ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಸಿದ್ದಾರ್ಥ್ ಗೋಯಲ್ ಹೇಳಿದರು.

ಈ ಪ್ರಕರಣದ ತನಿಖೆಯನ್ನು ಸಾವಳಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದುವರಿಸಿದ್ದು, ಶೀಘ್ರದಲ್ಲೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande