ಕೈಗೆ ಕೆಲಸ, ಖಾತೆಗೆ ಸಮಯಕ್ಕೆ ಕೂಲಿ – ವಿಬಿ-ಜಿ ರಾಮ್-ಜಿ 2025 ಯೋಜನೆಯಿಂದ ಗ್ರಾಮೀಣ ಅಭಿವೃದ್ಧಿಗೆ ಹೊಸ ಚೈತನ್ಯ
ವಿಜಯಪುರ, 05 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಗ್ರಾಮೀಣ ಪ್ರದೇಶಗಳ ಆರ್ಥಿಕ ಸಬಲೀಕರಣ ಹಾಗೂ ಕೂಲಿಕಾರ್ಮಿಕರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್-ಜಿ ಯೋಜನೆ–2025 ಗ್ರಾಮೀಣ ಅಭಿವೃದ್ಧಿಗೆ ಹೊಸ ಆಶಾಕಿರಣವಾಗಿ ಮೂಡಿಬಂದಿದೆ. ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ
ಗ್ರಾಮ


ವಿಜಯಪುರ, 05 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಗ್ರಾಮೀಣ ಪ್ರದೇಶಗಳ ಆರ್ಥಿಕ ಸಬಲೀಕರಣ ಹಾಗೂ ಕೂಲಿಕಾರ್ಮಿಕರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್-ಜಿ ಯೋಜನೆ–2025 ಗ್ರಾಮೀಣ ಅಭಿವೃದ್ಧಿಗೆ ಹೊಸ ಆಶಾಕಿರಣವಾಗಿ ಮೂಡಿಬಂದಿದೆ.

ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಜೊತೆಗೆ, ಕೂಲಿಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವ ವ್ಯವಸ್ಥೆ ಈ ಯೋಜನೆಯ ಪ್ರಮುಖ ವೈಶಿಷ್ಟ್ಯವಾಗಿದೆ.

ಯೋಜನೆಯಡಿ ಕೂಲಿಕಾರ್ಮಿಕರಿಗೆ ಹೆಚ್ಚಿದ ದಿನಗೂಲಿ ದರ ನಿಗದಿಪಡಿಸಲಾಗಿದ್ದು, ವರ್ಷಕ್ಕೆ 125 ದಿನಗಳ ಉದ್ಯೋಗ ಖಾತರಿ ಕಲ್ಪಿಸಲಾಗಿದೆ. ಮಹಿಳೆ-ಪುರುಷರಿಗೆ ಸಮಾನ ಕೂಲಿ ನೀಡುವ ಮೂಲಕ ಸಾಮಾಜಿಕ ಸಮಾನತೆಗೆ ಉತ್ತೇಜನ ನೀಡಲಾಗಿದೆ. ಕೂಲಿ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುವ ವ್ಯವಸ್ಥೆಯಿಂದ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಾಗಿದೆ.

ಗ್ರಾಮಗಳಲ್ಲಿ ಕೆರೆಗಳ ಅಭಿವೃದ್ಧಿ, ರಸ್ತೆ ನಿರ್ಮಾಣ, ಮಳೆ ನೀರು ಸಂಗ್ರಹ, ಜಲಸಂರಕ್ಷಣೆ, ವೃಕ್ಷಾರೋಪಣ, ಸಾರ್ವಜನಿಕ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಉದ್ಯೋಗ ಸೃಷ್ಟಿಯ ಜೊತೆಗೆ ಗ್ರಾಮೀಣ ಮೂಲಸೌಕರ್ಯವೂ ಬಲಗೊಳ್ಳುತ್ತಿದೆ.

ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಗ್ರಾಮೀಣ ಕುಟುಂಬಗಳ ಆದಾಯ ಹೆಚ್ಚಳಕ್ಕೆ ಇದು ನೆರವಾಗುತ್ತಿದೆ. ವಲಸೆ ಕಡಿಮೆ ಮಾಡಿ, ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ.

ಅಧಿಕಾರಿಗಳು ಗ್ರಾಮಸ್ಥರು ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದ್ದು, ಗ್ರಾಮೀಣ ಅಭಿವೃದ್ಧಿಯ ಗುರಿ ಸಾಧಿಸಲು ಸಾರ್ವಜನಿಕರ ಸಹಕಾರ ಅಗತ್ಯವೆಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande