೭ನೇ ದಿನಕ್ಕೆ ಕಾಲಿಟ್ಟ ಸೂಳೇಬಾವಿ ನೇಕಾರರ ಸತ್ಯಾಗ್ರಹ
ಬಾಗಲಕೋಟೆ, 05 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಸೂಳೇಬಾವಿ ಗ್ರಾಮದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೇಕಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ ಇವತ್ತಿಗೆ ಏಳನೇ ದಿನಕ್ಕ ಮುಂದುವರಿದಿದೆ. ಹಲವು ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸಂಬಂಧ
ಪ್ರೊಟೆಸ್ಟ್


ಬಾಗಲಕೋಟೆ, 05 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಸೂಳೇಬಾವಿ ಗ್ರಾಮದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೇಕಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ ಇವತ್ತಿಗೆ ಏಳನೇ

ದಿನಕ್ಕ ಮುಂದುವರಿದಿದೆ. ಹಲವು ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದಿರುವುದಾಗಿ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ನೇಕಾರರು, ತಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಸತತ ಸತ್ಯಾಗ್ರಹ ನಡೆಸುತ್ತಿದ್ದೇವೆ. ಆದರೆ ಇಲ್ಲಿಯವರೆಗೆ ಜಿಲ್ಲಾಧಿಕಾರಿ, ತಹಶೀಲ್ದಾರರು ಸೇರಿದಂತೆ ಯಾವುದೇ ಹಿರಿಯ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಭೇಟಿ ನೀಡಿ ಸಮಸ್ಯೆ ಆಲಿಸಿಲ್ಲ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸಂಘಟನೆಗಳು, ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಸಾಮಾಜಿಕ ಸಂಘಟನೆಗಳು ಹಾಗೂ ಯುವಜನರು ನೇಕಾರರ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ಹೋರಾಟದ ಮಾಹಿತಿಯನ್ನು ಹೆಚ್ಚಿನ ಜನರಿಗೆ ತಲುಪಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

ಪ್ರತಿಭಟನಾಕಾರರು ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದು, ಬೇಡಿಕೆಗಳು ಈಡೇರುವವರೆಗೆ ಸತ್ಯಾಗ್ರಹ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಸ್ಥಳೀಯರಲ್ಲಿ ಸಹ ಹೋರಾಟಕ್ಕೆ ಬೆಂಬಲ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳು ಹೋರಾಟದಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande