ಹಿರಿಯರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಅಚಲ ಬದ್ಧತೆಯೇ ನಮ್ಮ ಶಕ್ತಿ: ವಿಜಯೇಂದ್ರ
ಬೆಂಗಳೂರು, 05 ಜುಲೈ (ಹಿ.ಸ.): ಆ್ಯಂಕರ್:ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿಯಲ್ಲಿ ಭಾನುವಾರ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಮುಂದಿನ ಹೋರಾಟಗಳ ಕು
Bjp meeting


ಬೆಂಗಳೂರು, 05 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿಯಲ್ಲಿ ಭಾನುವಾರ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಹಾಗೂ ಮುಂದಿನ ಹೋರಾಟಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಮಾತನಾಡಿದ ವಿಜಯೇಂದ್ರ, ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಅಚಲ ಬದ್ಧತೆಯೇ ನಮ್ಮ ಶಕ್ತಿ. ಜನಪರ ಹೋರಾಟಗಳನ್ನು ಇನ್ನಷ್ಟು ತೀವ್ರಗೊಳಿಸಿ, ರಾಜ್ಯದ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಪಕ್ಷ ಬದ್ಧವಾಗಿದೆ. ಮುಂಬರುವ ರಾಜಕೀಯ ಸವಾಲುಗಳನ್ನು ಸಂಘಟಿತವಾಗಿ ಎದುರಿಸಲು ಅಗತ್ಯವಾದ ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯದ ವಿವಿಧ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಬಲವರ್ಧನೆ, ಜನಸಂಪರ್ಕ ಕಾರ್ಯಕ್ರಮಗಳು ಹಾಗೂ ಮುಂಬರುವ ರಾಜಕೀಯ ಕಾರ್ಯತಂತ್ರಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಪೊಂಗುಲೆಟಿ ಸುಧಾಕರ್ ರೆಡ್ಡಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಎಂ. ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮಾಜಿ ಸಚಿವ ಸಿ.ಟಿ. ರವಿ, ಕೋರ್ ಕಮಿಟಿ ಸದಸ್ಯ ನಿರ್ಮಲ್ ಕುಮಾರ್ ಸುರಾಣ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande