ಬಾಗಲಕೋಟೆಯಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜಯಂತಿ ಆಚರಣೆ: ರಾಷ್ಟ್ರಭಕ್ತಿ ಮತ್ತು ಅಖಂಡ ಭಾರತದ ಸಂಕಲ್ಪಕ್ಕೆ ಪುನರುಚ್ಚಾರ
ಬಾಗಲಕೋಟೆ, 06 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆಯ ಭಾರತೀಯ ಜನತಾ ಪಕ್ಷ ವಿಧಾನಸಭಾ ಕ್ಷೇತ್ರ ಕಚೇರಿಯಲ್ಲಿ ಪ್ರಖರ ರಾಷ್ಟ್ರೀಯವಾದಿ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳ
ಮೀಟ್


ಬಾಗಲಕೋಟೆ, 06 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆಯ ಭಾರತೀಯ ಜನತಾ ಪಕ್ಷ ವಿಧಾನಸಭಾ ಕ್ಷೇತ್ರ ಕಚೇರಿಯಲ್ಲಿ ಪ್ರಖರ ರಾಷ್ಟ್ರೀಯವಾದಿ, ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಡಾ. ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡಗೆ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರೀಯತೆಯ ಪರವಾಗಿ ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ ಮಹಾನ್ ನಾಯಕರು ಎಂದು ಸ್ಮರಿಸಿದರು. ರಾಷ್ಟ್ರದ ಹಿತಾಸಕ್ತಿಯನ್ನು ಸರ್ವೋಚ್ಚವಾಗಿ ಪರಿಗಣಿಸಿ ಅವರು ನೀಡಿದ ಕೊಡುಗೆಗಳು ಇಂದಿಗೂ ದೇಶದ ಯುವಜನತೆಗೆ ಪ್ರೇರಣೆಯಾಗಿವೆ ಎಂದು ಹೇಳಿದರು.

ದೇಶದಲ್ಲಿ ಒಂದು ರಾಷ್ಟ್ರ, ಒಂದು ಸಂವಿಧಾನ ಮತ್ತು ಒಂದು ಧ್ವಜ ಎಂಬ ಪರಿಕಲ್ಪನೆಗೆ ಅವರು ನೀಡಿದ ಬಲವಾದ ಬೆಂಬಲ ದೇಶದ ರಾಜಕೀಯ ಇತಿಹಾಸದಲ್ಲಿ ಅಜರಾಮರವಾಗಿದೆ. ಅವರ ತ್ಯಾಗ, ದೇಶಭಕ್ತಿ ಮತ್ತು ರಾಷ್ಟ್ರಸೇವೆಯ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕ್ತಾರರಾದ ಸತ್ಯನಾರಾಯಣ ಹೇಮಾದ್ರಿ, ಆಯಿಲ್ ಇಂಡಿಯಾ ಲಿಮಿಟೆಡ್ ನಿರ್ದೇಶಕರಾದ ರಾಜು ರೇವಣಕರ, ನಗರ ಮಂಡಲ ಅಧ್ಯಕ್ಷರಾದ ಬಸವರಾಜ ಹುನಗುಂದ, ವಿಭಾಗೀಯ ಸಹ ಪ್ರಭಾರಿಗಳಾದ ಬಸವರಾಜ ಯಂಕಂಚಿ, ಶ್ರೀ ಶ್ರೀಧರ ನಾಗರಬೆಟ್ಟ, ಶಶಿಕುಮಾರ ಗುತ್ತಣ್ಣವರ, ನಗರಸಭೆಯ ಮಾಜಿ ಸದಸ್ಯರು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಡಾ. ಮುಖರ್ಜಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮವು ರಾಷ್ಟ್ರಗೀತೆ ಹಾಗೂ ಭಾರತ ಮಾತೆಗೆ ಜಯಘೋಷದೊಂದಿಗೆ ಸಮಾಪ್ತಿಯಾಯಿತು. ಬಿಜೆಪಿ ಕಾರ್ಯಕರ್ತರು ದೇಶದ ಅಭಿವೃದ್ಧಿ, ರಾಷ್ಟ್ರೀಯ ಏಕತೆ ಮತ್ತು ಸಂಘಟನೆಯ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುವ ಸಂಕಲ್ಪವನ್ನು ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande