ಮೋರಟಗಿ ಕೆರೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಅಶೋಕ್ ಮನಗೂಳಿ; ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ವಿಜಯಪುರ, 06 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೋರಟಗಿ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಶಾಸಕ ಅಶೋಕ್ ಮನಗೂಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಮುಂದಿನ ಹಂತದ ಕಾರ್ಯಗಳ ಕುರ
ಮಲ


ವಿಜಯಪುರ, 06 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೋರಟಗಿ ಗ್ರಾಮದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ಶಾಸಕ ಅಶೋಕ್ ಮನಗೂಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಮುಂದಿನ ಹಂತದ ಕಾರ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ಯೋಜನೆಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಕೆರೆ ಅಭಿವೃದ್ಧಿಯಿಂದ ಗ್ರಾಮದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟ ವೃದ್ಧಿಯಾಗಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಶಾಸಕ ಅಶೋಕ್ ಮನಗೂಳಿ ಅಭಿಪ್ರಾಯಪಟ್ಟರು.

ಸಾರ್ವಜನಿಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಮಗಾರಿಯ ಪ್ರಗತಿ, ವೆಚ್ಚ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ವಿವರ ನೀಡಿದರು. ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಸಹ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ಪರಿಶೀಲನಾ ಭೇಟಿ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande