
ಬೆಂಗಳೂರು, 06 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ಮತ್ತು ಮಾರ್ಗಸೂಚಿ ಉಲ್ಲಂಘನೆಗಳು ನಡೆದಿವೆ ಎಂದು ಆರೋಪಿಸಿ ಬಿಜೆಪಿ–ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಮೈತ್ರಿ ನಾಯಕರ ನಿಯೋಗ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗವು ಎಸ್‌ಐಆರ್ ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಕಾನೂನುಬದ್ಧತೆಯ ಬಗ್ಗೆ ಪ್ರಶ್ನೆ ಎತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮತದಾರರ ಪರಿಶೀಲನೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಯಕರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.