ಕೊಪ್ಪಳ : ಜುಲೈ 10 ರಂದು ವಾಕ್ ಇನ್ ಇಂಟರ್ವ್ಯೂವ್
ಕೊಪ್ಪಳ, 06 ಜುಲೈ (ಹಿ.ಸ.) ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ಇಂಟರ್ವ್ಯೂವನ್ನು ಜುಲೈ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ
ಕೊಪ್ಪಳ : ಜುಲೈ 10 ರಂದು ವಾಕ್ ಇನ್ ಇಂಟರ್ವ್ಯೂವ್


ಕೊಪ್ಪಳ, 06 ಜುಲೈ (ಹಿ.ಸ.)

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ಇಂಟರ್ವ್ಯೂವನ್ನು ಜುಲೈ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಭಾಗವಹಿಸಬಹುದು. 18 ರಿಂದ 25 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು https://forms.gle/6yCAARAw8q2TiX8U8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande