ಇಂದು ರಾಜ್ಯದಲ್ಲಿ ವ್ಯಾಪಕ ಮಳೆ ಮುನ್ಸೂಚನೆ
ಬೆಂಗಳೂರು, 06 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಾದ್ಯಂತ ಇಂದು ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್
ಇಂದು ರಾಜ್ಯದಲ್ಲಿ ವ್ಯಾಪಕ ಮಳೆ ಮುನ್ಸೂಚನೆ


ಬೆಂಗಳೂರು, 06 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಾದ್ಯಂತ ಇಂದು ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.

ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಕೆಲವೆಡೆ ಭಾರೀ ಮಳೆ ಹಾಗೂ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ ಹೆಚ್ಚಿನ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸುವುದು, ವಿದ್ಯುತ್ ಕಂಬಗಳು ಹಾಗೂ ತಂತಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಮತ್ತು ಅಗತ್ಯವಿಲ್ಲದಿದ್ದರೆ ಹೊರಾಂಗಣ ಸಂಚಾರವನ್ನು ಮಿತಿಗೊಳಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande