
ಬಾಗಲಕೋಟೆ, 08 ಜುಲೈ (ಹಿ.ಸ.)
ಆ್ಯಂಕರ್ : ಬಣಜಿಗ ಸಮಾಜದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಜುಲೈ 26ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸಮಾಜದ ಅಧ್ಯಕ್ಷ ಮಹಾದೇವ ಅಂಗಡಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ವಿವಿಧ ಪದವಿ ಕೋರ್ಸ್ಗಳಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಶಿಕ್ಷಣ, ಸಾಮಾಜಿಕ ಸೇವೆ, ಕಲೆ, ಸಾಹಿತ್ಯ, ಕ್ರೀಡೆ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಹೆಸರನ್ನು ಬೆಳಗಿಸಿದ ಸಾಧಕರನ್ನೂ ಇದೇ ವೇದಿಕೆಯಲ್ಲಿ ಗೌರವಿಸಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದು, ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಮೂಡಿಸುವುದು ಹಾಗೂ ಸಮಾಜದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳು ಹಾಗೂ ಸಾಧಕರು ತಮ್ಮ ಹೆಸರುಗಳನ್ನು ಜುಲೈ 21ರೊಳಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಹೆಸರು ನೋಂದಣಿಗಾಗಿ ಗಿರೀಶ ಮೋದಿ (9480240888), ಸುಭಾಷ ಅವಟಿ (9060662014), ವಿರೇಶ ಕಲಾದಗಿ (9481702040), ಮುದಕಣ್ಣ ಹೊರಟ್ಟಿ (9611715117), ಸೀಮಾ ರಾಮತೀರ್ಥ (9148494125), ಶೋಭಾ ಅವಟಿ (9742457088), ದಾನೇಶ್ವರಿ ತಡಸಲೂರ (9972273094) ಹಾಗೂ ಸುಜಾತಾ ತಳೇವಾಡ (8296208224) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜದ ಉಪಾಧ್ಯಕ್ಷ ಮಿಲಿಂದ ಕೊಲ್ಹಾರ, ಮಹಿಳಾ ಘಟಕದ ಅಧ್ಯಕ್ಷೆ ಶಿಮಾ ರಾಮತೀರ್ಥ, ಪ್ರಧಾನ ಕಾರ್ಯದರ್ಶಿ ಸುಗೂರಪ್ಪ ಅಕ್ಕಿಮರಡಿ, ಮುಖಂಡ ಈರಣ್ಣ ಪಟ್ಟಣಶೆಟ್ಟಿ ಸೇರಿದಂತೆ ಸಮಾಜದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಸಮಾಜದ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ವಿದ್ಯಾರ್ಥಿಗಳು ಮತ್ತು ಸಾಧಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande