ಮಾದಕದ್ರವ್ಯ ವಿರುದ್ಧ ಕರ್ನಾಟಕ–ಕೇರಳ ಜಂಟಿ ಸಮರ:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು, 08 ಜುಲೈ (ಹಿ.ಸ.): ಆ್ಯಂಕರ್: ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಮತ್ತು ಕೇರಳ ರಾಜ್ಯಗಳು ಇನ್ನಷ್ಟು ಸಮನ್ವಯದಿಂದ ಕಾರ್ಯನಿರ್ವಹಿಸಲು ಒಪ್ಪಿಗೆ ಸೂಚಿಸಿವೆ. ಕೇರಳ ಸರ್ಕಾರ ಡ್ರಗ್ಸ್ ಮಾಫಿಯಾ ವಿರುದ್ಧ ಹಮ್ಮಿಕೊಂಡಿರುವ ವಿಶೇಷ ''ಆಪರೇಷನ್ ತೂಫಾನ್'' ಅಭಿ
ಡ್ರಗ್ಸ್ ವಿರುದ್ಧ ಉಭಯ ರಾಜ್ಯಗಳ ಜಂಟಿ ಹೋರಾಟಕ್ಕೆ ಒತ್ತು


ಬೆಂಗಳೂರು, 08 ಜುಲೈ (ಹಿ.ಸ.):

ಆ್ಯಂಕರ್:

ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಮತ್ತು ಕೇರಳ ರಾಜ್ಯಗಳು ಇನ್ನಷ್ಟು ಸಮನ್ವಯದಿಂದ ಕಾರ್ಯನಿರ್ವಹಿಸಲು ಒಪ್ಪಿಗೆ ಸೂಚಿಸಿವೆ. ಕೇರಳ ಸರ್ಕಾರ ಡ್ರಗ್ಸ್ ಮಾಫಿಯಾ ವಿರುದ್ಧ ಹಮ್ಮಿಕೊಂಡಿರುವ ವಿಶೇಷ 'ಆಪರೇಷನ್ ತೂಫಾನ್' ಅಭಿಯಾನವನ್ನು ಯಶಸ್ವಿಗೊಳಿಸಲು ಕರ್ನಾಟಕದ ಸಹಕಾರ ಅತ್ಯಗತ್ಯವಾಗಿದೆ ಎಂದು ಕೇರಳದ ಗೃಹ ಹಾಗೂ ಗುಪ್ತಚರ ಇಲಾಖೆ ಸಚಿವ ರಮೇಶ್ ಚೆನ್ನಿತ್ತಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, , ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಭಯ ರಾಜ್ಯಗಳ ಗಡಿಭಾಗದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವುದು, ಡ್ರಗ್ಸ್ ಕಳ್ಳಸಾಗಣೆ ತಡೆಯಲು ಜಂಟಿ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ನಡೆಸುವುದು ಹಾಗೂ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡ್ರಗ್ಸ್ ಜಾಲವನ್ನು ಧ್ವಂಸಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಯಿತು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕೇರಳ ಸಚಿವ ರಮೇಶ್ ಚೆನ್ನಿತ್ತಲ ಅವರು, ಯುವಜನತೆಯನ್ನು ಮಾದಕ ದ್ರವ್ಯಗಳ ಹಾವಳಿಯಿಂದ ರಕ್ಷಿಸಲು ರಾಜ್ಯಗಳ ನಡುವಿನ ಸಮನ್ವಯ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ, ಗುಪ್ತಚರ ಮಾಹಿತಿ ವಿನಿಮಯ, ಸಂಯೋಜಿತ ಕಾರ್ಯಾಚರಣೆಗಳು ಹಾಗೂ ಪೊಲೀಸ್ ಇಲಾಖೆಗಳ ನಡುವೆ ನಿರಂತರ ಸಹಕಾರದ ಮೂಲಕ ಡ್ರಗ್ಸ್ ಜಾಲವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಡ್ರಗ್ಸ್ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಅಂತರರಾಜ್ಯ ಡ್ರಗ್ಸ್ ಜಾಲವನ್ನು ನಿರ್ಮೂಲನೆ ಮಾಡುವುದು ಹಾಗೂ ಯುವ ಪೀಳಿಗೆಯನ್ನು ಮಾದಕ ದ್ರವ್ಯಗಳ ದುಷ್ಪರಿಣಾಮಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯು ಕೇರಳದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಭೆಯಲ್ಲಿ ಡ್ರಗ್ಸ್ ವಿರುದ್ಧದ ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಮನ್ವಯ, ಗುಪ್ತಚರ ಮಾಹಿತಿ ವಿನಿಮಯ, ಗಡಿಭಾಗದ ನಿಗಾ ವ್ಯವಸ್ಥೆ ಬಲಪಡಿಸುವುದು ಹಾಗೂ ಜಂಟಿ ಕಾರ್ಯಾಚರಣೆಗಳನ್ನು ಮತ್ತಷ್ಟು ವಿಸ್ತರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande