ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಚಾಲನೆ
ದಾವಣಗೆರೆ, 08 ಜುಲೈ (ಹಿ.ಸ.): ಆ್ಯಂಕರ್: ದಾವಣಗೆರೆಯ ಕೆ.ಎಚ್.ಬಿ. ತುಂಗಭದ್ರಾ ಬಡಾವಣೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ, ಸಾಮಾಜಿಕ ಅರಣ್ಯ ವಿಭಾಗ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭಾಗವಹಿಸಿ, ತಾಯಿಯ ಹೆಸರಿನಲ್
Tree plant


ದಾವಣಗೆರೆ, 08 ಜುಲೈ (ಹಿ.ಸ.):

ಆ್ಯಂಕರ್:

ದಾವಣಗೆರೆಯ ಕೆ.ಎಚ್.ಬಿ. ತುಂಗಭದ್ರಾ ಬಡಾವಣೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ, ಸಾಮಾಜಿಕ ಅರಣ್ಯ ವಿಭಾಗ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭಾಗವಹಿಸಿ, ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನದಡಿ ಶಾಲಾ ಮಕ್ಕಳೊಂದಿಗೆ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande