ರಾಯಚೂರು : ಜುಲೈ 10ರಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪ್ರವಾಸ
ರಾಯಚೂರು , 08 ಜುಲೈ (ಹಿ.ಸ.): ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಜುಲೈ 10ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಜುಲೈ 09ರ ಸಂಜೆ 4.15ಕ್ಕೆ ಬೆಂಗಳೂರಿನಿಂದ ರೈಲ್ವೇ ಮೂಲಕ
ರಾಯಚೂರು : ಜುಲೈ 10ರಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪ್ರವಾಸ


ರಾಯಚೂರು , 08 ಜುಲೈ (ಹಿ.ಸ.):

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಜುಲೈ 10ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಜುಲೈ 09ರ ಸಂಜೆ 4.15ಕ್ಕೆ ಬೆಂಗಳೂರಿನಿಂದ ರೈಲ್ವೇ ಮೂಲಕ ನಿರ್ಗಮಿಸಿ, ರಾತ್ರಿ 11ಕ್ಕೆ ರಾಯಚೂರು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಜುಲೈ 10ರ ಬೆಳಿಗ್ಗೆ 10ಗಂಟೆಗೆ ರಾಯಚೂರು ನಗರದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.30ಕ್ಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದ ಶ್ರೀ ಅಮರೇಶ್ವರ ಕ್ಷೇತ್ರದಲ್ಲಿ ವೇದಾಂತ ಸಮ್ಮೇಳನದ ಮಾತೃ ನಮನ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ರಾತ್ರಿ 10.30ಕ್ಕೆ ಮರಳಿ ರಾಯಚೂರು ನಗರಕ್ಕೆ ಆಗಮಿಸಿ, 11.45ಕ್ಕೆ ರಾಯಚೂರಿನಿಂದ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande