
ಹುಬ್ಬಳ್ಳಿ, 08 ಜುಲೈ (ಹಿ.ಸ.):
ಆ್ಯಂಕರ್:ಎಂಜಿನಿಯರಿಂಗ್ ಕಾಮಗಾರಿಗಳನ್ನು ಸುರಕ್ಷಿತವಾಗಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ಜುಲೈ 14ರಂದು ಸಂಚರಿಸುವ ರೈಲು ಸಂಖ್ಯೆ 66550 ಕೆಎಸ್‌ಆರ್ ಬೆಂಗಳೂರು–ಜೋಲಾರ್‌ಪೆಟ್ಟೈ ಮೆಮು ರೈಲು ಸೋಮನಾಯಕನಪಟ್ಟಿ ಮತ್ತು ಜೋಲಾರ್‌ಪೆಟ್ಟೈ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದಾಗಲಿದೆ. ಈ ರೈಲು ಜೋಲಾರ್‌ಪೆಟ್ಟೈ ಬದಲಿಗೆ ಸೋಮನಾಯಕನಪಟ್ಟಿ ನಿಲ್ದಾಣದಲ್ಲೇ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಅದೇ ದಿನದ 66549 ಜೋಲಾರ್‌ಪೆಟ್ಟೈ–ಕೆಎಸ್‌ಆರ್ ಬೆಂಗಳೂರು ಮೆಮು ರೈಲು ಜೋಲಾರ್‌ಪೆಟ್ಟೈ ಮತ್ತು ಸೋಮನಾಯಕನಪಟ್ಟಿ ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಸೋಮನಾಯಕನಪಟ್ಟಿ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.
ಇದಲ್ಲದೆ, ಜುಲೈ 10, 12, 15, 17, 19 ಮತ್ತು 22ರಂದು ಸಂಚರಿಸುವ ರೈಲು ಸಂಖ್ಯೆ 16552 ಅಶೋಕಪುರಂ–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಕಾಟ್ಪಾಡಿ ಮತ್ತು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದಾಗಲಿದ್ದು, ಕಾಟ್ಪಾಡಿ ನಿಲ್ದಾಣದಲ್ಲೇ ತನ್ನ ಸಂಚಾರವನ್ನು ಕೊನೆಗೊಳಿಸಲಿದೆ.
ಅದೇ ದಿನಗಳಲ್ಲಿ ಸಂಚರಿಸುವ ರೈಲು ಸಂಖ್ಯೆ 12607 ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್–ಕೆಎಸ್‌ಆರ್ ಬೆಂಗಳೂರು ಲಾಲ್‌ಬಾಗ್ ಎಕ್ಸ್‌ಪ್ರೆಸ್ ರೈಲು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಕಾಟ್ಪಾಡಿ ನಡುವಿನ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಕಾಟ್ಪಾಡಿ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.
ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಹಾಗೂ ರೈಲು ವೇಳಾಪಟ್ಟಿಯನ್ನು ಪರಿಶೀಲಿಸಿಕೊಂಡು ಪ್ರಯಾಣಿಸುವಂತೆ ದಕ್ಷಿಣ ರೈಲ್ವೆ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.