ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ಲೋಪದ ಆರೋಪ: ಅಧಿಕಾರಿಯ ವರ್ತನೆ ವಿರುದ್ಧ ಆಕ್ರೋಶ
ವಿಜಯಪುರ, 09 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಸಾರ್ವಜನಿಕರ ತೆರಿಗೆ ಹಣದ ದುರುಪಯೋಗ ಹಾಗೂ ಪ್ರಶ್ನಿಸಿದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಕೆಲ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿ
ಆರೋಗ್ಯ


ವಿಜಯಪುರ, 09 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಸಾರ್ವಜನಿಕರ ತೆರಿಗೆ ಹಣದ ದುರುಪಯೋಗ ಹಾಗೂ ಪ್ರಶ್ನಿಸಿದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಕೆಲ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯಮಿತವಾಗಿ ಹಾಜರಾಗದೆ ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಪಡೆಯುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದರಿಂದ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಅಧೀಕ್ಷಕರಾದ ಮೊಹ್ಮದ್ ಯಾಸಿನ್ ವಿರುದ್ಧವೂ ಆರೋಪಗಳು ಕೇಳಿಬಂದಿವೆ. ಇಲಾಖೆಯಲ್ಲಿನ ಲೋಪಗಳನ್ನು ಪ್ರಶ್ನಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ನಾವು ಯಾವುದೇ ಬೆದರಿಕೆಗೆ ಹೆದರುವವರಲ್ಲ. ಸಾರ್ವಜನಿಕ ಹಿತಾಸಕ್ತಿಗಾಗಿ ಪ್ರಶ್ನಿಸುವ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಸುಳ್ಳು ಪ್ರಕರಣಗಳ ಮೂಲಕ ಧ್ವನಿ ಅಡಗಿಸಲು ಯತ್ನಿಸಿದರೂ ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಆಡಳಿತದಲ್ಲಿ ಪಾರದರ್ಶಕತೆ ತರಬೇಕು, ಕರ್ತವ್ಯ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande