
ರಾಯಚೂರು , 09 ಜುಲೈ (ಹಿ.ಸ.):
ಆ್ಯಂಕರ್ : ರಾಯಚೂರು ಕೃಷಿ ಇಲಾಖೆಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆತ್ಮ ಯೋಜನೆಯಡಿ 2026-27ನೇ ಸಾಲಿನಲ್ಲಿ ನೇರ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹಾಗೂ ಹೊಸದಾಗಿ ಮಂಜೂರಾದ ತಾಲೂಕಾ ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರುಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕ ತಾಂತ್ರಿಕ ವ್ಯವಸ್ಥಾಪಕರು (ಬಿಟಿಎಮ್) 02 ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬAಧಿತ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಅಥವಾ ಕೃಷಿ/ಕೃಷಿ ಸಂಬAಧಿತ ಪದವಿಯೊಂದಿಗೆ 5 ವರ್ಷ ಸಹಾಯಕ ತಾಂತ್ರಿಕ ವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ. 2 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ಎಟಿಎಮ್) 08 ಹುದ್ದೆಗಳಿಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ 1 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರಾಗಿದ್ದಲ್ಲಿ (ಎಸಿ/ಎಸ್.ಟಿ) – 40 ವರ್ಷ, ಸಾಮಾನ್ಯ– 35 ಹಾಗೂ ಇತರೆ (ಒಬಿಸಿ) – 38 ವಯೋಮಿತಿಯನ್ನು ಹೊಂದಿರಬೇಕು. ಅಥವಾ ಈಗಾಗಲೇ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (ಬಿಟಿಎಮ್) ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ಎಟಿಎಮ್)ಗಳಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿದಲ್ಲಿ ಅಂತಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳು ಛಾಯಾಚಿತ್ರ ಲಗತ್ತಿಸಿದ ವೈಯಕ್ತಿಕ ಮಾಹಿತಿ, ವಿದ್ಯಾರ್ಹತೆ, ದಾಖಲೆ, ಅನುಭವ ಪ್ರಮಾಣ ಪತ್ರ, ಆಧಾರ ಪ್ರತಿ, ಕಂಪ್ಯೂಟರ್ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳ ದೃಡೀಕೃತ ಪ್ರತಿಗಳನ್ನು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ರಾಯಚೂರು – 584101ಗೆ ಅಂಚೆ ಮುಖಾಂತರ ಅಥವಾ ಖುದ್ದಾಗಿ ಜುಲೈ 16ರ ಸಂಜೆ 5.30ರೊಳಗಾಗಿ ತಲುಪುವಂತೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಚೇರಿಯ ಸಮಯದಲ್ಲಿ ಭೇಟಿ ನೀಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್