ಎಬಿವಿಪಿ ಸಂಸ್ಥಾಪನಾ ದಿನ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ದಿನದ ಶುಭಾಶಯ ಕೋರಿದ ಮಾಜಿ ಶಾಸಕ ಅರುಣ್ ಶಹಾಪುರ
ವಿಜಯಪುರ, 09 ಜುಲೈ (ಹಿ.ಸ.) ಆ್ಯಂಕರ್ : ವಿಶ್ವದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯೆಂದು ಪರಿಗಣಿಸಲ್ಪಡುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಸ್ಥಾಪನಾ ದಿನ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಮಾಜಿ ಶಾಸಕ ಅರುಣ್ ಶಹಾಪುರ ಅವರು ಸಮಸ್ತ ವಿದ್ಯಾರ್ಥಿ ಸಮುದಾಯಕ್ಕೆ ಹಾರ್ದಿಕ ಶು
ಅಬಿಬಿಪ್


ವಿಜಯಪುರ, 09 ಜುಲೈ (ಹಿ.ಸ.)

ಆ್ಯಂಕರ್ : ವಿಶ್ವದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯೆಂದು ಪರಿಗಣಿಸಲ್ಪಡುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಸ್ಥಾಪನಾ ದಿನ ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಮಾಜಿ ಶಾಸಕ ಅರುಣ್ ಶಹಾಪುರ ಅವರು ಸಮಸ್ತ ವಿದ್ಯಾರ್ಥಿ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ರಾಷ್ಟ್ರೀಯ ಚಿಂತನೆ, ಸಾಮಾಜಿಕ ಜವಾಬ್ದಾರಿ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಮೂಡಿಸುವಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ.

ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿ ವಿದ್ಯಾರ್ಥಿಗಳು ಬೆಳೆಯಬೇಕು ಎಂಬ ಉದ್ದೇಶದಿಂದ ಎಬಿವಿಪಿ ಹಲವು ದಶಕಗಳಿಂದ ಶಿಕ್ಷಣ, ಸಮಾಜ ಸೇವೆ, ವ್ಯಕ್ತಿತ್ವ ವಿಕಾಸ, ರಾಷ್ಟ್ರಪ್ರೇಮ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆ, ಶೈಕ್ಷಣಿಕ ಸುಧಾರಣೆ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಸಂಘಟನೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ದೇಶಪ್ರೇಮ ಮತ್ತು ಸಾಮಾಜಿಕ ಬದ್ಧತೆಯನ್ನು ಬೆಳೆಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಯುವಜನತೆ ದೇಶದ ಅಮೂಲ್ಯ ಶಕ್ತಿಯಾಗಿದ್ದು, ಅವರಲ್ಲಿ ರಾಷ್ಟ್ರೀಯತೆ ಮತ್ತು ಸೇವಾ ಮನೋಭಾವ ಬೆಳೆಸುವ ಕಾರ್ಯದಲ್ಲಿ ಎಬಿವಿಪಿಯ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಅರುಣ್ ಶಹಾಪುರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಹಾಗೂ ದೇಶದ ಸಮಸ್ತ ವಿದ್ಯಾರ್ಥಿ ವೃಂದಕ್ಕೆ ರಾಷ್ಟ್ರೀಯ ವಿದ್ಯಾರ್ಥಿ ದಿನದ ಹಾರ್ದಿಕ ಶುಭಾಶಯಗಳನ್ನು ಕೋರಿ, ಅವರ ಶೈಕ್ಷಣಿಕ ಹಾಗೂ ಜೀವನ ಪಯಣ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande