ಮುಧೋಳ ತಹಸೀಲ್ದಾರರ ಸಮ್ಮುಖದಲ್ಲಿ ಎಸ್ಐಆರ್ ನಮೂನೆ ಭರ್ತಿ ಮಾಡಿದ ಸಂಸದ ಗೋವಿಂದ ಕಾರಜೋಳ
ಬಾಗಲಕೋಟೆ, 09 ಜುಲೈ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ಪಾರದರ್ಶಕಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ, ಇಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ತಮ್ಮ
ಮತದಾರ


ಬಾಗಲಕೋಟೆ, 09 ಜುಲೈ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ಪಾರದರ್ಶಕಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ, ಇಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ತಮ್ಮ ಗೃಹ ಕಚೇರಿಯಲ್ಲಿ ಮುಧೋಳ ತಹಸೀಲ್ದಾರರ ಸಮ್ಮುಖದಲ್ಲಿ ಎಸ್ಐಆರ್ ಸಂಬಂಧಿಸಿದ ನೋಂದಣಿ ನಮೂನೆಯನ್ನು ಭರ್ತಿ ಮಾಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಎಸ್ಐಆರ್ ಪ್ರಕ್ರಿಯೆಯ ಉದ್ದೇಶ, ಮತದಾರರ ಮಾಹಿತಿಯನ್ನು ನವೀಕರಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ಕುರಿತು ಮಾಹಿತಿ ನೀಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯನ್ನು ದೋಷರಹಿತವಾಗಿಸಿ, ಅರ್ಹ ಪ್ರತಿಯೊಬ್ಬ ನಾಗರಿಕನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸುವ ನಿಟ್ಟಿನಲ್ಲಿ ಈ ವಿಶೇಷ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಲಾಯಿತು.

ಗೋವಿಂದ ಕಾರಜೋಳ ಅವರು ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಯ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸರಿಯಾಗಿ ದಾಖಲಾಗಿರುವುದು ಅತ್ಯಂತ ಮಹತ್ವದ್ದಾಗಿದೆ. ಚುನಾವಣಾ ಆಯೋಗದ ಎಸ್ಐಆರ್ ಅಭಿಯಾನಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಮಾಹಿತಿಯನ್ನು ಪರಿಶೀಲಿಸಿ, ತಿದ್ದುಪಡಿ ಅಗತ್ಯವಿದ್ದರೆ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಮುಧೋಳ ತಹಸೀಲ್ದಾರರು ಸೇರಿದಂತೆ ಸಂಬಂಧಿತ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದು, ಎಸ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande