ಹಿಪ್ಪರಗಿ ಬ್ಯಾರೇಜ್ಗೆ 1.19 ಲಕ್ಷ ಕ್ಯುಸೆಕ್ ನೀರಿನ ಒಳ ಹರಿವು: ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಆತಂಕ
ಬಾಗಲಕೋಟೆ, 09 ಜುಲೈ (ಹಿ.ಸ.) ಆ್ಯಂಕರ್ : ಮಹಾರಾಷ್ಟ್ರದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದ ಕೃಷ್ಣಾ
ನಡಿ


ಬಾಗಲಕೋಟೆ, 09 ಜುಲೈ (ಹಿ.ಸ.)

ಆ್ಯಂಕರ್ : ಮಹಾರಾಷ್ಟ್ರದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ಗೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ನದಿಪಾತ್ರದ ತಗ್ಗು ಪ್ರದೇಶಗಳ ಜನರಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇಂದು ಬೆಳಗಿನ ಮಾಹಿತಿ ಪ್ರಕಾರ ಹಿಪ್ಪರಗಿ ಬ್ಯಾರೇಜ್ಗೆ 1,19,800 ಕ್ಯುಸೆಕ್ ನೀರು ಒಳಹರಿವು ದಾಖಲಾಗಿದ್ದು, ಬ್ಯಾರೇಜ್ ನೀರಿನ ಮಟ್ಟವನ್ನು ನಿಯಂತ್ರಿಸುವ ಉದ್ದೇಶದಿಂದ 1,19,250 ಕ್ಯುಸೆಕ್ ನೀರನ್ನು ನದಿಪಾತ್ರಕ್ಕೆ ಹೊರಬಿಡಲಾಗುತ್ತಿದೆ. ಒಳಹರಿವು ಮತ್ತು ಹೊರಹರಿವು ಬಹುತೇಕ ಸಮಾನ ಪ್ರಮಾಣದಲ್ಲಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಇನ್ನಷ್ಟು ನೀರು ಹರಿದುಬರುವ ಸಾಧ್ಯತೆ ಇದೆ ಎಂದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ನದಿಯ ತೀರ ಪ್ರದೇಶದ ಗ್ರಾಮಗಳ ನಿವಾಸಿಗಳು, ರೈತರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯವಿದ್ದರೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.

ಕೃಷ್ಣಾ ನದಿಪಾತ್ರದಲ್ಲಿ ಅನಗತ್ಯವಾಗಿ ಸಂಚರಿಸದಂತೆ, ಮೀನುಗಾರಿಕೆ, ಬಟ್ಟೆ ತೊಳೆಯುವುದು ಹಾಗೂ ನದಿ ದಾಟುವಂತಹ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ತಪ್ಪಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ವಿಶೇಷವಾಗಿ ಮಕ್ಕಳನ್ನು ನದಿಯ ಸಮೀಪಕ್ಕೆ ಬಿಡದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಮಳೆಯ ಪ್ರಮಾಣ ಹೆಚ್ಚಾದಲ್ಲಿ ಬ್ಯಾರೇಜ್ನಿಂದ ಇನ್ನಷ್ಟು ನೀರನ್ನು ಹೊರಬಿಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಹಿಪ್ಪರಗಿ ಬ್ಯಾರೇಜ್ಗೆ ಹೆಚ್ಚುತ್ತಿರುವ ನೀರಿನ ಹರಿವು ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಕೂಲಕರವಾಗಿದ್ದರೂ, ಪ್ರವಾಹದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ನದಿ ತೀರದ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande