ಮಾಜಿ ಶಾಸಕ ಆನಂದ ನ್ಯಾಮಗೌಡರ ಸತತ ಪ್ರಯತ್ನ: ಕಡಕೋಳ–ಕವಟಗಿ ಗ್ರಾಮಗಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರು
ವಿಜಯಪುರ, 09 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಹಾಗೂ ಕವಟಗಿ ಗ್ರಾಮಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪ್ರೌಢ ಶಿಕ್ಷಣದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ. 2026–27ನೇ ಸಾಲಿನ ಪೀಏಬಿ ಅನುಮೋದನೆಯಡಿ ಎರಡೂ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಪ್ರೌಢಶಾಲೆ ಮಂಜೂರಾ
ಅನುಮೋದನೆ


ವಿಜಯಪುರ, 09 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಹಾಗೂ ಕವಟಗಿ ಗ್ರಾಮಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪ್ರೌಢ ಶಿಕ್ಷಣದ ಕನಸು ಇದೀಗ ನನಸಾಗುವ ಹಂತಕ್ಕೆ ಬಂದಿದೆ. 2026–27ನೇ ಸಾಲಿನ ಪೀಏಬಿ ಅನುಮೋದನೆಯಡಿ ಎರಡೂ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಪ್ರೌಢಶಾಲೆ ಮಂಜೂರಾಗಿದ್ದು, ಈ ಸಾಧನೆಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನಿರಂತರ ಪ್ರಯತ್ನವೇ ಪ್ರಮುಖ ಕಾರಣವಾಗಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಇತ್ತು. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಇದೀಗ ತಮ್ಮದೇ ಗ್ರಾಮದಲ್ಲೇ ಪ್ರೌಢಶಾಲೆ ಆರಂಭವಾಗಲಿರುವುದರಿಂದ ವಿದ್ಯಾರ್ಥಿಗಳಿಗೆ ಸುಲಭವಾಗಿ ಶಿಕ್ಷಣ ಮುಂದುವರಿಸುವ ಅವಕಾಶ ದೊರೆಯಲಿದ್ದು, ಶಾಲಾ ತೊರೆಯುವವರ ಸಂಖ್ಯೆಯೂ ಕಡಿಮೆಯಾಗುವ ನಿರೀಕ್ಷೆ ಇದೆ.

ಈ ಕುರಿತು ಶಿಕ್ಷಣ ಇಲಾಖೆಯ ವಿವಿಧ ಹಂತಗಳಲ್ಲಿ ನಿರಂತರವಾಗಿ ಮನವಿ ಸಲ್ಲಿಸುವುದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದು ಹಾಗೂ ಸರ್ಕಾರದ ಗಮನ ಸೆಳೆಯುವ ಮೂಲಕ ಮಾಜಿ ಶಾಸಕ ಆನಂದ ಸಿದ್ದು ನ್ಯಾಮಗೌಡರು ವಿಶೇಷ ಆಸಕ್ತಿ ವಹಿಸಿದ್ದರು. ಅವರ ಸತತ ಪ್ರಯತ್ನದ ಫಲವಾಗಿ ಕಡಕೋಳ ಹಾಗೂ ಕವಟಗಿ ಗ್ರಾಮಗಳ ಬಹುಕಾಲದ ಬೇಡಿಕೆ ಈಡೇರಿದ್ದು, ಗ್ರಾಮಸ್ಥರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ನಿರ್ಧಾರದಿಂದ ಗ್ರಾಮೀಣ ಶಿಕ್ಷಣ ವ್ಯವಸ್ಥೆಗೆ ಹೊಸ ಬಲ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಮುಂದಿನ ಉನ್ನತ ಶಿಕ್ಷಣಕ್ಕೆ ಭದ್ರ ಅಡಿಪಾಯ ನಿರ್ಮಾಣವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದ್ದು, ಜಮಖಂಡಿ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ಹೊಸ ಅಧ್ಯಾಯ ಆರಂಭವಾದಂತಾಗಿದೆ.

ಗ್ರಾಮಸ್ಥರು, ಪೋಷಕರು ಹಾಗೂ ಸಾರ್ವಜನಿಕರು ಈ ಮಹತ್ವದ ಸಾಧನೆಗಾಗಿ ಮಾಜಿ ಶಾಸಕ ಆನಂದ ಸಿದ್ದು ನ್ಯಾಮಗೌಡರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಶಿಕ್ಷಣಾಭಿವೃದ್ಧಿಗೆ ಅವರು ಮುಂದೆಯೂ ಇದೇ ರೀತಿಯ ಸೇವೆ ಮುಂದುವರಿಸಲಿ ಎಂದು ಆಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande