ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಭೀಕರ ಅಪಘಾತ: 6 ಮಂದಿ ಸಾವು
ಯಲ್ಲಾಪುರ, 09 ಜುಲೈ (ಹಿ.ಸ.): ಆ್ಯಂಕರ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ ಮೂಲದ ಪ್ರವ
Accident


ಯಲ್ಲಾಪುರ, 09 ಜುಲೈ (ಹಿ.ಸ.):

ಆ್ಯಂಕರ್:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧಾರವಾಡ ಮೂಲದ ಪ್ರವಾಸಿಗರು ಧರ್ಮಸ್ಥಳ ಹಾಗೂ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26), ಸಂಜೀವ್/ಸಂಜಯ್ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಒಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ್ (28) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande