ಜು.11 ರಂದು ರಾಷ್ಟ್ರೀಯ ಲೋಕ್ ಅದಾಲತ್
ಬಳ್ಳಾರಿ, 09 ಜುಲೈ (ಹಿ.ಸ.): ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರ
ಜು.11 ರಂದು ರಾಷ್ಟ್ರೀಯ ಲೋಕ್ ಅದಾಲತ್


ಬಳ್ಳಾರಿ, 09 ಜುಲೈ (ಹಿ.ಸ.):

ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಸಹಾಯವಾಣಿ ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧಲಿಂಗ ಪ್ರಭು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande