
ಬಳ್ಳಾರಿ, 09 ಜುಲೈ (ಹಿ.ಸ.)
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಎಸ್ಎಸ್ಪಿ ಪೋರ್ಟಲ್ ನಲ್ಲಿ 1 ರಿಂದ 8ನೇ ತರಗತಿಯ ಮೆಟ್ರಿಕ್ ಪೂರ್ವ ಹಾಗೂ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಧರ್ಮದ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ‘ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ’ ಇಲ್ಲಿಗೆ ನೇರವಾಗಿ ಭೇಟಿ ನೀಡಬಹುದು.
ಸಹಾಯವಾಣಿ ಸಂಖ್ಯೆ:
ಬಳ್ಳಾರಿ ಜಿಲ್ಲಾ/ತಾಲ್ಲೂಕು ಮಾಹಿತಿ ಕೇಂದ್ರ: 08392-200125 / 224 ಮತ್ತು 8310321101
ಸಿರುಗುಪ್ಪ ತಾಲ್ಲೂಕು: 9148889975
ಸಂಡೂರು ತಾಲ್ಲೂಕು: 9036925966
ಅರ್ಹ ವಿದ್ಯಾರ್ಥಿಗಳು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್