ಪಿಎಂ-ಶ್ರೀ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, 09 ಜುಲೈ (ಹಿ.ಸ.) ಆ್ಯಂಕರ್ ರಾಜ್ಯದ 464 ಅನುಮೋದಿತ ಪಿಎಂ-ಶ್ರೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಶಿಕ್ಷಣ ಒದಗಿಸುವ ಉದ್ದೇಶದಿಂದ ಕಂಪ್ಯೂಟರ್ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಬಿಸಿಎ, ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್), ಬಿ
464 ಪಿಎಂ-ಶ್ರೀ ಶಾಲೆಗಳಿಗೆ ಕಂಪ್ಯೂಟರ್ ಶಿಕ್ಷಕರ ನೇಮಕಾತಿ ಆರಂಭ


ಬೆಂಗಳೂರು, 09 ಜುಲೈ (ಹಿ.ಸ.)

ಆ್ಯಂಕರ್

ರಾಜ್ಯದ 464 ಅನುಮೋದಿತ ಪಿಎಂ-ಶ್ರೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಶಿಕ್ಷಣ ಒದಗಿಸುವ ಉದ್ದೇಶದಿಂದ ಕಂಪ್ಯೂಟರ್ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.

ಬಿಸಿಎ, ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್), ಬಿ.ಟೆಕ್/ಬಿಇ (ಐಟಿ/ಸಿಎಸ್) ಅಥವಾ ಕಂಪ್ಯೂಟರ್ ಸೈನ್ಸ್ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ತಂತ್ರಜ್ಞಾನದ ಮೂಲಕ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ರೂಪಿಸುವ ಅವಕಾಶ ಇದಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರೆ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande