
ಬಳ್ಳಾರಿ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ತಾಲ್ಲೂಕಿನ ಸಂಗನಕಲ್ಲು ಗ್ರಾಮದ 6 ನೇ ವಾರ್ಡ್ ನ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಕುಬೇರ ಎನ್ನುವ 20 ವರ್ಷದ ಯುವಕ ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 4.4 ಅಡಿ, ದುಂಡು ಮುಖ, ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಮಾನಸಿಕ ಅಸ್ವಸ್ಥನಾಗಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನಶಿ ಬಣ್ಣದ ತುಂಬು ತೋಳಿನ ಅಂಗಿ, ಬಿಳಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್