ಬಳ್ಳಾರಿ ಯುವಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಕೌಲ್ ಬಜಾರ್ ನಿವಾಸಿಯಾದ ಸಾಗರ ಎನ್ನುವ 20 ವರ್ಷದ ಯುವಕ ಜುಲೈ 31 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎ
ಬಳ್ಳಾರಿ ಯುವಕ ಕಾಣೆ: ಪತ್ತೆಗೆ ಮನವಿ


ಬಳ್ಳಾರಿ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಕೌಲ್ ಬಜಾರ್ ನಿವಾಸಿಯಾದ ಸಾಗರ ಎನ್ನುವ 20 ವರ್ಷದ ಯುವಕ ಜುಲೈ 31 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಚಹರೆ ಗುರುತು: ಎತ್ತರ 4.5 ಅಡಿ, ದುಂಡು ಮುಖ, ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದು, ಬಲಗೈ ಮೇಲೆ ‘ಪ್ರಿಯ’ ಎಂಬ ಹೆಸರಿನ ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ಗೋಧಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ಇಂಗ್ಲೀಷ್, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande