
ರಾಮನಗರ, 10 ಆಗಸ್ಟ್ (ಹಿ.ಸ.):
ಆ್ಯಂಕರ್:ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ನಡೆಯುತ್ತಿರುವ ಮೂರು ದಿನಗಳ ಬೃಹತ್ ಪಾದಯಾತ್ರೆಯ ಎರಡನೇ ದಿನದ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚಾಲನೆ ನೀಡಿದರು.
ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಭಾಗದ 26 ಗ್ರಾಮಗಳ ರೈತರು ಕಳೆದ ಒಂದು ವರ್ಷದಿಂದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಬೆಂಬಲವಾಗಿ ಜೆಡಿಎಸ್ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಈ ವೇಳೆ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ , ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಮೌನ ವಹಿಸಿದೆ ಎಂದು ಆರೋಪಿಸಿದರು. ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವವರೆಗೆ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.