
ವಿಜಯಪುರ, 10 ಆಗಸ್ಟ್ (ಹಿ.ಸ.)
ಆ್ಯಂಕರ್ :
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದ ಕಮರಿ ಮಠದಲ್ಲಿ ಇಂದು ನಡೆದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮವು ಭಕ್ತಿಭಾವದ ವಾತಾವರಣಕ್ಕೆ ಸಾಕ್ಷಿಯಾಯಿತು.
ಮುಗಳಖೋಡ-ಜಿಡಗಾ ಮಠದ ಪೂಜ್ಯ ಶ್ರೀಗಳ ‘ನಡೆ ಲಚ್ಯಾಣದ ಶ್ರೀ ಸಿದ್ಧಲಿಂಗರ ಕಡೆ’ ಎಂಬ ಪಾವನ ಸಂಕಲ್ಪದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಲಚ್ಯಾಣದ ಶ್ರೀ ಸಿದ್ಧಲಿಂಗ ಮಹಾರಾಜರ ಪುಣ್ಯಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜೆ, ಧಾರ್ಮಿಕ ವಿಧಿ-ವಿಧಾನಗಳು ಹಾಗೂ ಆಶೀರ್ವಚನಗಳು ನೆರವೇರಿದವು. ಭಕ್ತರು ಪೂಜ್ಯರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ಧಲಿಂಗ ಮಹಾರಾಜರ ಸೇವೆ ಹಾಗೂ ಆಧ್ಯಾತ್ಮಿಕ ಕೊಡುಗೆಯನ್ನು ಸ್ಮರಿಸಲಾಯಿತು. ಲಚ್ಯಾಣದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀಗಳು ಹೇಳಿದರು.
ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ; ಸಮಾಜಕ್ಕೆ ಸಂಸ್ಕಾರ, ಶಿಕ್ಷಣ, ಸೇವೆ, ಶಾಂತಿ ಮತ್ತು ಸೌಹಾರ್ದತೆಯ ದಾರಿದೀಪಗಳಾಗಿವೆ ಎಂದು ಅವರು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande