
ಬೆಂಗಳೂರು, 10 ಆಗಸ್ಟ್ (ಹಿ.ಸ.):
ಆ್ಯಂಕರ್:
ಶ್ರೀಲಂಕಾದಲ್ಲಿ ನಡೆಯಲಿರುವ ಚೊಚ್ಚಲ ಜೆಐಟಿಒ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಗಾಗಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಅಧಿಕೃತ ಚಾಲನಾ ಕಾರ್ಯಕ್ರಮ ಆಗಸ್ಟ್ 11ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಜೈನ್ ಸ್ಪೋರ್ಟ್ಸ್ ಹಾಗೂ ನವರತ್ನ ಜ್ಯುವೆಲ್ಲರ್ಸ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ 1983ರ ವಿಶ್ವಕಪ್ ವಿಜೇತ ಕಪಿಲ್ ದೇವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಐಪಿಎಲ್ ಆಟಗಾರ ವೈಶಾಖ್ ವಿಜಯಕುಮಾರ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು ಬ್ಲಾಸ್ಟರ್ಸ್ ತಂಡ ಆಗಸ್ಟ್ 24ರಿಂದ ಸೆಪ್ಟೆಂಬರ್ 5ರವರೆಗೆ ಶ್ರೀಲಂಕಾದ ಕೊಲಂಬೊದ ಸಿಸಿಸಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಜೆಐಟಿಒ ಪ್ರೀಮಿಯರ್ ಲೀಗ್‌ನಲ್ಲಿ ಸ್ಪರ್ಧಿಸಲಿದೆ. ಆಗಸ್ಟ್ 24ರಂದು ಲೀಗ್‌ನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.