
ಕೊಪ್ಪಳ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ಕೊಪ್ಪಳದಿಂದ ಕರ್ಕಿಹಳ್ಳಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ನಡೆದಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಈ ಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ರಸ್ತೆ ತಗ್ಗು-ದಿನ್ನೆಗಳಿಂದ ಕೂಡಿದೆ. ಪರಿಣಾಮ ವಾಹನ ಸವಾರರು ನಿತ್ಯವೂ ಪರದಾಡುವಂತಾಗಿದೆ. ಇದೇ ರಸ್ತೆಯಲ್ಲಿ ಈ ಹಿಂದೆ ಬಸ್ ಪಲ್ಟಿಯಾದ ಘಟನೆ ಕೂಡ ನಡೆದಿರುವ ಉದಾಹರಣೆ ಇದೆ.
ಯಾವುದೇ ಅನಾಹುತ ಸಂಭವಿಸುವ ಮುನ್ನ ರಸ್ತೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್