ಹೆಬ್ಬಾಳಟ್ಟಿಯಲ್ಲಿ ನೂತನ ಆರ್ ಎಂಎಸ್ ಎ ಪ್ರೌಢಶಾಲೆ ಉದ್ಘಾಟನೆ
ವಿಜಯಪುರ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಶಿಕ್ಷಣವೇ ಸಮಾಜದ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಶಾಶ್ವತ ಅಡಿಪಾಯವಾಗಿದ್ದು, ಗ್ರಾಮೀಣ ಭಾಗದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಹೆಬ್ಬಾಳಟ್ಟಿ
ಶಾಲೆ


ವಿಜಯಪುರ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಶಿಕ್ಷಣವೇ ಸಮಾಜದ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಶಾಶ್ವತ ಅಡಿಪಾಯವಾಗಿದ್ದು, ಗ್ರಾಮೀಣ ಭಾಗದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆರ್ಎಂಎಸ್ಎ ಪ್ರೌಢಶಾಲೆಯ ನೂತನ ಕಟ್ಟಡವನ್ನು ಎಂ.ಬಿ. ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಡೆದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ ಎಂದು ತಿಳಿಸಿದರು.

ಹೆಬ್ಬಾಳಟ್ಟಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಈ ನೂತನ ಶಾಲೆ, ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಜ್ಞಾನ, ಸಂಸ್ಕಾರ, ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ವಾತಾವರಣವನ್ನು ಶಾಲೆಗಳು ರೂಪಿಸಬೇಕು ಎಂದು ಅವರು ಹೇಳಿದರು.

ಗ್ರಾಮೀಣ ಭಾಗದ ಮಕ್ಕಳಲ್ಲಿ ಅಪಾರ ಪ್ರತಿಭೆ ಮತ್ತು ಸಾಮರ್ಥ್ಯವಿದೆ. ಆದರೆ ಸೂಕ್ತ ಅವಕಾಶಗಳು ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ದೊರೆತಾಗ ಮಾತ್ರ ಅವರ ಪ್ರತಿಭೆ ಸಂಪೂರ್ಣವಾಗಿ ಹೊರಹೊಮ್ಮಲು ಸಾಧ್ಯ. ಈ ಹಿನ್ನೆಲೆಯಲ್ಲಿ ನೂತನ ಶಾಲೆಯ ನಿರ್ಮಾಣವು ಹೆಬ್ಬಾಳಟ್ಟಿ ಗ್ರಾಮದ ಶೈಕ್ಷಣಿಕ ಪ್ರಗತಿಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದರು.

ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹಾಗೂ ಆತ್ಮವಿಶ್ವಾಸ ಮೂಡಿಸುವ ಮೂಲಕ ಅವರ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

“ಮಕ್ಕಳ ಭವಿಷ್ಯಕ್ಕೆ ಹೂಡುವ ಪ್ರತಿಯೊಂದು ಹೆಜ್ಜೆಯೂ ನಾಳಿನ ಸುಭದ್ರ ಸಮಾಜ ನಿರ್ಮಾಣದತ್ತ ಸಾಗುವ ಹೆಜ್ಜೆಯಾಗಿದೆ” ಎಂಬ ಆಶಯದೊಂದಿಗೆ, ಹೆಬ್ಬಾಳಟ್ಟಿ ಗ್ರಾಮದ ನೂತನ ಶಾಲೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಜ್ಞಾನ ಮತ್ತು ಅವಕಾಶಗಳ ಹೊಸ ಬಾಗಿಲು ತೆರೆಯಲಿ ಎಂದು ಅವರು ಹಾರೈಸಿದರು.

ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಸಾಧನೆ ಮಾಡಿ, ಹೆಬ್ಬಾಳಟ್ಟಿ ಗ್ರಾಮದೊಂದಿಗೆ ಬಬಲೇಶ್ವರ ಮತಕ್ಷೇತ್ರ ಹಾಗೂ ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande