ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಭಾಗಿ
ಕೊಪ್ಪಳ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಆಗಸ್ಟ್ 11ರ ಮಂಗಳವಾರದಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಿಗ್ಗೆ 10.
ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ  ಭಾಗಿ


ಕೊಪ್ಪಳ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಆಗಸ್ಟ್ 11ರ ಮಂಗಳವಾರದಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ಬೆಳಿಗ್ಗೆ 10.30ಕ್ಕೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ಗೆ ಆಗಮಿಸುವರು. ಬಳಿಕ ಮುನಿರಾಬಾದ್ನ ಕಾಡಾ ಟಿ.ಬಿ.ಪಿ. ಸಭಾಂಗಣದಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುವ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು.

ನಂತರ ಮಧ್ಯಾಹ್ನ 3.30 ಗಂಟೆಗೆ ಮುನಿರಾಬಾದ್ನ ಕಾಡಾ ಟಿ.ಬಿ.ಪಿ. ಸಭಾಂಗಣದಲ್ಲಿ ನಡೆಯಲಿರುವ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸುವವರು ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande