
ಬಳ್ಳಾರಿ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ಸಿರುಗಪ್ಪ ರಸ್ತೆಯ ವಕ್ರಾಣಿ ಕ್ಯಾಂಪ್ ನ ನಿವಾಸಿಯಾದ ವೆಂಕಟೇಶನಾಯ್ಕ್ ಅಲಿಯಾಸ್ ಭವ್ಯ ಎನ್ನುವ 30 ವರ್ಷದ ವ್ಯಕ್ತಿ ಜೂನ್ 03 ರಂದು ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.5 ಅಡಿ, ಕೋಲು ಮುಖ, ಕೆಂಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದು, ನಡುವಿನ ಮೇಲೆ ಧಾತ್ರಿ ಹಾಗೂ ಎದೆಯ ಮೇಲೆ ದುರ್ಗಾಶ್ರೀ ಎಂಬ ಹೆಸರಿನ ಅಚ್ಚೆ ಹಾಕಿಸಿಕೊಂಡಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಸೀರೆ ಹಾಗೂ ಕೆಂಪು ಬಣ್ಣದ ಕುಪ್ಪಸ ಧರಿಸಿರುತ್ತಾರೆ. ಕನ್ನಡ, ಲಂಬಾಣಿ, ಹಿಂದಿ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್