ನೂತನ ಸಚಿವ ವಿಜಯಾನಂದ ಕಾಶಪ್ಪನವರಗೆ ಎಸ್.ಆರ್. ಪಾಟೀಲ್ ಅಭಿನಂದನೆ
ಬಾಗಲಕೋಟೆ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಆಯ್ಕೆಯಾಗಿರುವ ವಿಜಯಾನಂದ ಕಾಶಪ್ಪನವರ ಅವರು ಇಂದು ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಅವರ ನಿವಾಸಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ, ಆತ್ಮೀಯವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್
ಭೇಟಿ


ಬಾಗಲಕೋಟೆ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಆಯ್ಕೆಯಾಗಿರುವ ವಿಜಯಾನಂದ ಕಾಶಪ್ಪನವರ ಅವರು ಇಂದು ಬಾಗಲಕೋಟೆಯಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಅವರ ನಿವಾಸಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ, ಆತ್ಮೀಯವಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ಅವರು ನೂತನ ಸಚಿವ ವಿಜಯಾನಂದ ಕಾಶಪ್ಪನವರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಆಡಳಿತ ನೀಡಲಿ ಎಂದು ಶುಭ ಹಾರೈಸಿದರು.

ವಿಜಯಾನಂದ ಕಾಶಪ್ಪನವರ ಅವರು ಸಚಿವರಾಗಿ ಆಯ್ಕೆಯಾಗಿರುವುದು ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಜನರಲ್ಲಿ ಸಂತಸ ಮೂಡಿಸಿದೆ. ತಮ್ಮ ರಾಜಕೀಯ ಅನುಭವ ಹಾಗೂ ಜನಪರ ಕಾಳಜಿಯ ಮೂಲಕ ಸರ್ಕಾರದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುವ ವಿಶ್ವಾಸವಿದೆ ಎಂದು ಎಸ್.ಆರ್. ಪಾಟೀಲ್ ಅವರು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದರು.

ಭೇಟಿಯ ವೇಳೆ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿ ವಿಚಾರಗಳು ಹಾಗೂ ಜನರ ಸಮಸ್ಯೆಗಳ ಕುರಿತು ಇಬ್ಬರು ನಾಯಕರು ಸೌಹಾರ್ದಯುತವಾಗಿ ಚರ್ಚಿಸಿದರು. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು, ರೈತರು, ಕಾರ್ಮಿಕರು, ಯುವಕರು ಸೇರಿದಂತೆ ವಿವಿಧ ವರ್ಗಗಳ ಆಶೋತ್ತರಗಳಿಗೆ ಸ್ಪಂದಿಸುವುದು ಸೇರಿದಂತೆ ಹಲವು ವಿಚಾರಗಳು ಮಾತುಕತೆಯಲ್ಲಿ ಪ್ರಸ್ತಾಪಗೊಂಡವು.

ನೂತನ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ವಿಜಯಾನಂದ ಕಾಶಪ್ಪನವರ ಅವರಿಗೆ ಜಿಲ್ಲೆಯ ಜನರ ಪರವಾಗಿ ಶುಭಾಶಯಗಳನ್ನು ತಿಳಿಸಿದ ಎಸ್.ಆರ್. ಪಾಟೀಲ್, ಅವರ ಸಚಿವ ಸ್ಥಾನದ ಅವಧಿಯಲ್ಲಿ ಬಾಗಲಕೋಟೆ ಜಿಲ್ಲೆಗೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳು ದೊರೆಯಲಿ ಎಂದು ಆಶಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande