
ಕೊಪ್ಪಳ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ. ಭಾರತ ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಿದ್ದು, ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ವಿವಿಧ ಕ್ಷೇತ್ರಗಳಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಸಂಸ್ಕೃತಿ ಮತ್ತು ನೂತನ ಅವಿಷ್ಕಾರಾಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://awards.gov.in ಗೆ ಭೇಟಿ ನೀಡಿ ಆಗಸ್ಟ್ 15 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಮಾಹಿತಿಯನ್ನು ಸಹ ಪಡೆಯಬಹುದು ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್