ಸಂಯಮ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ
ಕೊಪ್ಪಳ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ
ಸಂಯಮ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ


ಸಂಯಮ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ


ಸಂಯಮ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ: ಸಿದ್ರಾಮೇಶ್ವರ


ಕೊಪ್ಪಳ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಂಯಮ ಪ್ರಶಸ್ತಿ-2026 ಪ್ರದಾನ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ಕೊಪ್ಪಳ ಜಿಲ್ಲೆಯ ಹಟ್ಟಿಗ್ರಾಮವನ್ನು 2026ನೇ ಸಾಲಿನ ಸಂಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ರಾಜ್ಯ ಮಟ್ಟದ ಸಂಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 16 ರಂದು ಸಂಜೆ 4.30 ಗಂಟೆಗೆ ಸಂಯಮ ಪ್ರಶಸ್ತಿ-2026ರ ಪ್ರದಾನ ಸಮಾರಂಭವು ಕೊಪ್ಪಳ ತಾಲ್ಲೂಕಿನ ಹಟ್ಟಿ ಗ್ರಾಮದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ 10 ಗ್ರಾಮಗಳಿಗೆ ಮದ್ಯ ಮಾರಾಟ ಮುಕ್ತ ಅಭಿನಂದನಾ ಪ್ರಶಸ್ತಿ ವಿತರಣೆಯೂ ಜರುಗಲಿದೆ ಎಂದರು.

ರಾಜ್ಯ ಮಟ್ಟದ ಈ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ಆಯೋಜಿಸಬೇಕು. ಹಟ್ಟಿ ಗ್ರಾಮದ ರಸ್ತೆಯ ದುರಸ್ತಿಗೆ ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರ ಜೊತೆಗೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ಕಾರ್ಯಕ್ರಮದಲ್ಲಿ ಸೂಕ್ತ ವೇದಿಕೆ ವ್ಯವಸ್ಥೆಯನ್ನು ಮಾಡಬೇಕು. ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷಿಯಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸಾರ್ವಜನಿಕರಿಗೆ ಅಗತ್ಯ ಬಸ್ ವ್ಯವಸ್ಥೆಯನ್ನು ಮಾಡಬೇಕು. ಜನರಿಗೆ ಕೂಡಲು ಆಸನಗಳು, ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಮಾಡಬೇಕು. ಕಾರ್ಯಕ್ರಮ ದಿನದಂದು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಬೇಕು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೂ ಕರೆ ತರಬೇಕು. ಸಮಾರಂಭದ ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳೆಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಸಭೆಯಲ್ಲಿ ಗಾಂಧಿ ಬಳಗದ ಸದಸ್ಯರಾದ ಸಾವಿತ್ರಿ ಮುಜುಮದಾರ ಹಾಗೂ ಪ್ರಮೋದ್ ಕುಲಕರ್ಣಿ, ಕೊಪ್ಪಳ ಅಬಕಾರಿ ಡಿವೈಎಸ್ಪಿ ಶಾಂತೇಶ ಕಮತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಮರೇಶ ಹಾವಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ, ಕೊಪ್ಪಳ ತಾ.ಪಂ ಇಓ ದುಂಡಪ್ಪ ತುರಾದಿ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕರಾದ ನಾಗೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande