ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
ಬಾಗಲಕೋಟೆ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಹಾಗೂ ಪ್ರತಿಭೆ ಮತ್ತು ಪರಿಶ್ರಮಕ್ಕೆ ಸೂಕ್ತ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ನಿರಾಣಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ಕಾರ್ಯ ಮುಂದುವರಿದಿದೆ ಎಂದು ಮಾಜಿ ಸಚಿವ ಮುರ
ನಿರಾಣಿ


ಬಾಗಲಕೋಟೆ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಹಾಗೂ ಪ್ರತಿಭೆ ಮತ್ತು ಪರಿಶ್ರಮಕ್ಕೆ ಸೂಕ್ತ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ನಿರಾಣಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ಕಾರ್ಯ ಮುಂದುವರಿದಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಜಮಖಂಡಿ ತಾಲೂಕು ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚೆನ್ನಮ್ಮ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ, ನಿರಾಣಿ ಫೌಂಡೇಶನ್ ವತಿಯಿಂದ ದತ್ತು ಪಡೆದಿರುವ ಮಕ್ಕಳಿಗೆ ಶೈಕ್ಷಣಿಕ ಕಿಟ್ಗಳನ್ನು ವಿತರಿಸಲಾಯಿತು. ಈ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವುದರ ಜೊತೆಗೆ, ಅವರ ಶೈಕ್ಷಣಿಕ ಬದುಕಿಗೆ ಅಗತ್ಯವಾದ ಬೆಂಬಲ ಒದಗಿಸಲಾಯಿತು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಆರ್ಥಿಕ ಕಾರಣಗಳಿಂದ ಯಾವುದೇ ಪ್ರತಿಭಾವಂತ ವಿದ್ಯಾರ್ಥಿಯ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಆಶಯದೊಂದಿಗೆ ವಿವಿಧ ರೀತಿಯ ಶೈಕ್ಷಣಿಕ ನೆರವು ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವುದು, ಅವರ ಆತ್ಮವಿಶ್ವಾಸವನ್ನು ಬೆಳೆಸುವುದು ಹಾಗೂ ಉನ್ನತ ಶಿಕ್ಷಣದ ಕನಸುಗಳನ್ನು ನನಸಾಗಿಸಲು ಪ್ರೋತ್ಸಾಹಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ನೀಡುವ ಶೈಕ್ಷಣಿಕ ನೆರವು ಕೇವಲ ಪುಸ್ತಕ, ಬ್ಯಾಗ್ ಅಥವಾ ಕಲಿಕಾ ಸಾಮಗ್ರಿಗಳ ವಿತರಣೆಗೆ ಸೀಮಿತವಾಗದೆ, ಅವರ ಭವಿಷ್ಯದ ನಿರ್ಮಾಣಕ್ಕೆ ನೀಡುವ ಮಹತ್ವದ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಮಾಜದ ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣದ ಅವಕಾಶ ದೊರೆತಾಗ ಮಾತ್ರ ಸಮರ್ಥ ಹಾಗೂ ಸಶಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಆಲಗೂರದ ಶ್ರೀ ಲಕ್ಷ್ಮಣ ಮುತ್ಯಾ ಧರಿದೇವರ ಮಠದ ಪೂಜ್ಯ ಪ.ಪೂ. ಶ್ರೀ ಶಾಂತಮೂರ್ತಿ ಮಹಾಸ್ವಾಮಿಗಳು, ಜಮಖಂಡಿಯ ಮುತ್ತಿನಕಂತಿಮಠದ ಪೂಜ್ಯ ಪ.ಪೂ. ಶ್ರೀ ಷ.ಬ್ರ. ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹಾಗೂ ಜಮಖಂಡಿಯ ಓಲೆಮಠದ ಪೂಜ್ಯ ಪ.ಪೂ. ಶ್ರೀ ಆನಂದ ದೇವರು ಅವರು ದಿವ್ಯ ಸಾನಿಧ್ಯ ವಹಿಸಿ ವಿದ್ಯಾರ್ಥಿಗಳಿಗೆ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಎಂ.ಆರ್.ಎನ್. ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕರಾದ ಸಂಗಮೇಶ್ ಆರ್. ನಿರಾಣಿ, ಪ್ರಮುಖರಾದ ಪಿ.ಎನ್. ಪಾಟೀಲ್, ಸಿ.ಪಿ. ಜನವಾಡ್, ಶ್ರೀ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಮುಖಂಡರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ನೆರವು ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಭವಿಷ್ಯದಲ್ಲಿ ಅವರು ತಮ್ಮ ಸಾಮರ್ಥ್ಯವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಆಶಯವಾಗಿತ್ತು.

ಮಕ್ಕಳ ಶಿಕ್ಷಣಕ್ಕೆ ನೀಡುವ ಪ್ರತಿಯೊಂದು ನೆರವು, ಅವರ ಉಜ್ವಲ ಭವಿಷ್ಯಕ್ಕೆ ನಾವು ನೀಡುವ ಕೊಡುಗೆ. ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande