
ಕೊಪ್ಪಳ, 10 ಆಗಸ್ಟ್ (ಹಿ.ಸ.)
ಆ್ಯಂಕರ್ : ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ 11ರಂದು ಮಧ್ಯಾಹ್ನ 3.30 ಗಂಟೆಗೆ ಮುನಿರಾಬಾದ್ನ ಟಿ.ಬಿ.ಪಿ ಕಾಡಾ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ ಮಲ್ಲಿಗವಾಡ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್