ಬಳ್ಳಾರಿ: ಮತದಾರರ ಪಟ್ಟಿ ಪರಿಷ್ಕರಣೆ : ಆಗಸ್ಟ್ 24ರಂದು ಕರಡು ಪ್ರಕಟ; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ
ಬಳ್ಳಾರಿ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪರಿಷ್ಕøತ ವೇಳಾಪಟ್ಟಿ ಪ್ರಕಾರ ನಡೆದಿದ್ದು, ಜಿಲ್ಲೆಯ 1,227 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿಯು ಪ್ರಕಟ
ಬಳ್ಳಾರಿ: ಮತದಾರರ ಪಟ್ಟಿ ಪರಿಷ್ಕರಣೆ : ಆಗಸ್ಟ್ 24ರಂದು ಕರಡು ಪ್ರಕಟ; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ


ಬಳ್ಳಾರಿ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪರಿಷ್ಕøತ ವೇಳಾಪಟ್ಟಿ ಪ್ರಕಾರ ನಡೆದಿದ್ದು, ಜಿಲ್ಲೆಯ 1,227 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿಯು ಪ್ರಕಟವಾಗಲಿದೆ.

ಮತದಾರರ ಕರಡು ಪಟ್ಟಿ ಪ್ರಕಟವಾದ ದಿನದಿಂದ ಸೆಪ್ಟಂಬರ್ 23ರ ವರೆಗೆ ಸಾರ್ವಜನಿಕರು ಅಹವಾಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ.

ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿಯ 1227 ಮತಗಟ್ಟೆಗಳಲ್ಲಿ 12.29,586 ಮತದಾರರಿದ್ದಾರೆ. ಈ ಪೈಕಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2,79,144, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 2,51,325, ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ 2,28,277, ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ 2,28,666 ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 2,42,174 ಮತದಾರರಿದ್ದಾರೆ.

ಎಸ್ಐಆರ್ ಪ್ರಕ್ರಿಯೆಯಲ್ಲಿ ಗೈರು ಹಾಜರಿ, ಸ್ಥಳಾಂತರ, ನಿಧನ, ಡುಪ್ಲಿಕೇಟ್ ಹಾಗೂ ಇತರೆ ವಿಭಾಗಗಳಲ್ಲಿ ಹೆಸರು ಕಾಣಿಸಿಕೊಂಡಿರುವ ಮತದಾರರನ್ನು ಗುರುತಿಸುವ ಕೆಲಸವು ಆಗಸ್ಟ್ 17ರವರೆಗೆ ನಡೆಯಲಿದೆ.

ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಆಗಸ್ಟ್ 24 ರಿಂದ ಸೆಪ್ಟಂಬರ್ 23ರವರೆಗೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅವಕಾಶವಿದೆ. ಅರ್ಹ ಮತದಾರರು ನಮೂನೆ-6, ನಿಗದಿಪಡಿಸಿರುವ ದಾಖಲೆಗಳು ಹಾಗೂ ಘೋಷಣಾ ನಮೂನೆಯನ್ನು ಸಲ್ಲಿಸಿ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande