ಆಗಸ್ಟ್ 14 ರಂದು ಕೊಪ್ಪಳದಲ್ಲಿ ವಾಕ್ ಇನ್-ಇಂಟರ್ವ್ಯೂವ್
ಕೊಪ್ಪಳ, 10 ಆಗಸ್ಟ್ (ಹಿ.ಸ.) ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವನ್ನು ಆಗಸ್ಟ್ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಆಗಸ್ಟ್ 14 ರಂದು ಕೊಪ್ಪಳದಲ್ಲಿ ವಾಕ್ ಇನ್-ಇಂಟರ್ವ್ಯೂವ್


ಕೊಪ್ಪಳ, 10 ಆಗಸ್ಟ್ (ಹಿ.ಸ.)

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವನ್ನು ಆಗಸ್ಟ್ 14 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಿ.ಯು.ಸಿ ಐಟಿಐ ಡಿಪ್ಲೋಮಾ, ಬಿಇ, ಬಿ.ಎಸ್.ಸಿ ಅಥವಾ ಎಂ.ಎಸ್.ಸಿ - ಕೆಮಿಸ್ಟ್ರಿ ಬೋಧನಾ ಕ್ಷೇತ್ರದಲ್ಲಿ ಆಸಕ್ತಿವುಳ್ಳವರು ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಬಹುದು.

18 ರಿಂದ 26 ವರ್ಷದ ಅರ್ಹ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು https://forms.gle/yzUzvPfN3wfsXXLg8 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande