
ಚಿಕ್ಕಮಗಳೂರು, 10 ಆಗಸ್ಟ್ (ಹಿ.ಸ.):
ಆ್ಯಂಕರ್:
ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ, ಗುತ್ತಿಗೆ, ದಿನಗೂಲಿ ಹಾಗೂ ಗೌರವಧನ ಆಧಾರಿತ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸದೆ ತಡೆಹಿಡಿದಿರುವುದನ್ನು ಖಂಡಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿ.ಟಿ. ರವಿ, ನೌಕರರ ನ್ಯಾಯಯುತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಕನಿಷ್ಠ ವೇತನ ಕಾಯ್ದೆ-1948ರ ಅನ್ವಯ ಮೇ 22, 2026ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಂತೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸದೆ ವೇತನ ತಡೆಹಿಡಿದಿರುವುದು ಅಮಾನವೀಯ. ಮೇ ತಿಂಗಳಲ್ಲಿ ಕನಿಷ್ಠ ವೇತನ ಜಾರಿಗೆ ಆದೇಶ ಹೊರಡಿಸಿ, ಜೂನ್‌ನಲ್ಲಿ ವೇತನ ನೀಡಿ, ಜುಲೈನಲ್ಲಿ ಮತ್ತೆ ಪರಿಷ್ಕೃತ ವೇತನವನ್ನು ಹಿಂಪಡೆದಿರುವುದು ನೌಕರರಿಗೆ ಮಾಡಿರುವ ಅನ್ಯಾಯ ಎಂದು ಅವರು ಆರೋಪಿಸಿದರು.
ತಕ್ಷಣವೇ ವೇತನ ಪರಿಷ್ಕರಣೆ ಹಿಂಪಡೆದಿರುವ ನಿರ್ಧಾರವನ್ನು ರದ್ದುಗೊಳಿಸಿ, ಮೇ 22, 2026ರಿಂದಲೇ ಪರಿಷ್ಕೃತ ಕನಿಷ್ಠ ವೇತನದ ಆರ್ಥಿಕ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರಿಗೆ ಸಿ.ಟಿ. ರವಿ ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.